ಚಿಕ್ಕಮಗಳೂರು: ಕಾಫಿನಾಡಲ್ಲಿ ಮತ್ತೆ ಕಾಡಾನೆ ಹಾವಳಿ ಮುಂದುವರೆದಿದೆ.ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬನ್ನೂರಿನಲ್ಲಿ ನಡೆದಿದೆ.
ಅನಿತಾ(25 ಮೃತ ದುರ್ದೈವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಮಹಿಳೆಯಾಗಿದ್ದು ಕಾಫಿ ತೋಟದಲ್ಲಿ ಕೆಲಸvಮಾಡಿಕೊಂಡು ವಾಸವಿದ್ದರು. ಬುಧವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಕಾಡಾನೆ ದಾಳಿ ನಡೆಸಿದೆ.
ಕಾಡಾನೆ ದಾಳಿ ಅನಿತಾಗೆ ವೇಳೆ ತೀವ್ರ ಗಾಯಗಳಾಗಿದ್ದರಿಂದ ಪ್ರಾಥಮಿಕ ಚಿಕಿತ್ಸೆ ಕೊಡಲು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ದಾರಿ ಮಧ್ಯೆ ಅನಿತಾ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.