ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಗುಡ್ಡದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಹೌದು .. ಹತ್ತಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಆವರಿಸಿದ್ದು ನಿರಂತರ ಗಾಳಿಯಿಂದ ಹೆಚ್ಚುತ್ತಿರೋ ಬೆಂಕಿಯ ಕೆನ್ನಾಲಿಗೆ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಟ್ಟರು.
ಇದರ ಮಧ್ಯ ಸ್ಥಳಿಯರ ಸಹಕಾರದಿಂದ ಬೆಂಕಿ ನಂದಿಸಲು ಅಧಿಕಾರಿಗಳು ಹೋರಾಟ ನಡೆಸುತ್ತಿದ್ದು ಗುಡ್ಡದಲ್ಲಿ ಬೀಸುತ್ತಿರುವ ಭಾರೀ ಗಾಳಿಯಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
