ಶಿವಮೊಗ್ಗ : ಶ್ವಾನ ಕಚ್ಚಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೊಸನಗರದಲ್ಲಿ ನಡೆದಿದೆ. ಗೇರುಪುರ ಮೂಲದ ಸಂಗೀತ (38) ಮೃತ ಮಹಿಳೆ. ಹೊಸನಗರದಲ್ಲಿ ಜುಲೈ 14 ರಂದು ಸಂಗೀತ ಅವರಿಗೆ ಶ್ವಾನ ಕಚ್ಚಿತ್ತು. ಹೊಸನಗರ ಆಸ್ಪತ್ರೆಯಲ್ಲಿ ಮೊದಲಿಗೆ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ದಿನದಿಂದ ದಿನಕ್ಕೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನದ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.

