ಮೂಡಿಗೆರೆ:ಮಹಿಳಾ ಸಂಘಗಳಿಂದ ಬಿ.ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಅಕ್ರಮ ಮದ್ಯ ಮಾರಾಟ ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ
ಹೌದು ತಾಲೂಕಿನ ಬಿ.ಹೊಸಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುವ ಜಾಲವು ವ್ಯಾಪಕವಾಗಿ ಹಬ್ಬಿದ್ದು, ಇದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ತೀವ್ರ ಕಾಳಜಿಯಿಂದ ಸ್ವತಃ ಗ್ರಾಮಸ್ಥರು, ವಿಶೇಷವಾಗಿ ಗ್ರಾಮದ ಮಹಿಳೆಯರು ಹಾಗೂ ಹಲವು ಸಂಘ ಸಂಸ್ಥೆಗಳು ಒಡಗೂಡಿ ಅಕ್ರಮ ಮಧ್ಯ ಮಾರಾಟವನ್ನು ನಿಷೇಧಿಸುವ ಕುರಿತು ಇಂದು ವಿಶೇಷ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು ಅದರಂತೆ
ಬಿ.ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುವವರ ವಿರುದ್ಧ ಗ್ರಾಮಸ್ಥರು ಸ್ವಯಂಪ್ರೇರಿತವಾಗಿ ದೂರು ದಾಖಲಿಸುವ ಮೂಲಕ ಕಠಿಣಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಒತ್ತಾಯಿಸಲಾಗಿದೆ,
