ಕಳಸ: ಕಾಫಿತೋಟದಲ್ಲಿ ಮರಗಸಿ ಮಾಡುವಾಗ ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್ ಯೊಂದರಲ್ಲಿ ಸಂಭವಿಸಿದೆ.
ಹೌದು .. ತರೀಕೆರೆ ಮೂಲದ ಮಂಜುನಾಥ್ (53) ಮೃತ ಕಾರ್ಮಿಕನಾಗಿರುತ್ತಾನೆ. ಜೀವನೋಪಾಯಕ್ಕಾಗಿ ಕಳಸದಲ್ಲಿ ಬಂದು ನೆಲೆಸಿದ್ದು ಇಲ್ಲಿನ ತೋಟಗಳಲ್ಲಿ ಕೆಲಸ ಮಾಡುತ್ತಿದ್ದನು.ಎಂದಿನಂತೆ ಮರಗಸಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತೀವ್ರವಾಗಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಕಳಸ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೆತ್ತಿಕೊಂಡಿದ್ದಾರೆ.
