Wednesday, July 15, 2026
Homeಜಿಲ್ಲಾಸುದ್ದಿಕೊಪ್ಪದಲ್ಲಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಕಾರ್ಮಿಕ: ಅಗ್ನಿಶಾಮಕ ದಳದ ಸಿಬ್ಬಂದಿಯಿಂದ...

ಕೊಪ್ಪದಲ್ಲಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಕಾರ್ಮಿಕ: ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣೆ!

Telegram Group
Join Now

ಕೊಪ್ಪ: ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕವಡೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ನಡೆದಿದೆ.

ಹೌದು .. ಸರ್ಕಾರಿ  ಶಾಲೆಯ ಆವರಣದ ಕೊಳವೆ ಬಾವಿಯ ಮೇಲ್ಭಾಗವನ್ನು ಸ್ವಚ್ಛಗೊಳಿಸುವ ವೇಳೆ ವಿಶ್ವನಾಥ್ ಎಂಬ ಕಾರ್ಮಿಕ ಆಕಸ್ಮಿಕವಾಗಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.

ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ವಿಶ್ವನಾಥ್​ರನ್ನ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.

ಬಾವಿಗೆ ಬಿದ್ದ ರಭಸಕ್ಕೆ ವಿಶ್ವನಾಥ್​ಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಚಿಕಿತ್ಸೆಗಾಗಿ ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments