Wednesday, February 11, 2026
Homebig breakingರಾಜ್ಯ ಸರ್ಕಾರ ಸುಳ್ಳು ಭರವಸೆ ನೀಡುವುದರಲ್ಲಿ ಎತ್ತಿದ ಕೈ - ನಟ ಅಹಿಂಸಾ ಚೇತನ್‌ ವಾಗ್ದಾಳಿ

ರಾಜ್ಯ ಸರ್ಕಾರ ಸುಳ್ಳು ಭರವಸೆ ನೀಡುವುದರಲ್ಲಿ ಎತ್ತಿದ ಕೈ – ನಟ ಅಹಿಂಸಾ ಚೇತನ್‌ ವಾಗ್ದಾಳಿ

ಚಾಮರಾಜನಗರ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಭರವಸೆ ನೀಡುವುದರಲ್ಲಿ ಎತ್ತಿದ ಕೈ. ಅಧಿಕಾರಕ್ಕೆ ಬರಲು ಸುಳ್ಳು ಭರವಸೆ ನೀಡಿ, ಈ ಈಗ ಯಾವುದೇ ಒಂದು ಕೆಲಸವನ್ನೂ ಕೂಡಾ ಮಾಡಿಲ್ಲ ಅಂತ ನಟ ಅಹಿಂಸಾ ಚೇತನ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸರ್ಕಾರವನ್ನು ಯಾರು ಕೇಳುವವರೇ ಇಲ್ಲದಂತಾಗಿದೆ. ಇಂಥ ಮನಸ್ಥಿತಿಯ ಸರ್ಕಾರದ ವಿರುದ್ಧ ಜನ ಸಿಡಿದೇಳಬೇಕಿದೆ ಅಧಿಕಾರಕ್ಕೆ ಬರಲು ಭರವಸೆಗಳನ್ನು ಕೊಡುವಾಗ ಇದ್ದ ಇಚ್ಛಾಶಕ್ತಿ ಈಗ ಕಾಣುತ್ತಿಲ್ಲ. ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡಲಿಲ್ಲ. ಜಾತಿಗಣತಿ ವರದಿ ಬಿಡುಗಡೆ ಮಾಡಲಿಲ್ಲ. ರೈತವಿರೋಧಿ ಕಾನೂನು ತೆಗೆಯಲಿಲ್ಲ. ರಾಜ್ಯ ಸರ್ಕಾರದಿಂದ ಕನ್ನಡದ ಜನತೆಗೆ ಯಾವುದಕ್ಕೂ ನ್ಯಾಯ ಸಿಗಲಿಲ್ಲ ಎಂದರು.
ರಾಜ್ಯ ಸರ್ಕಾರಕ್ಕೆ ಯಾರು ಹೇಳೋರಿಲ್ಲ, ಕೇಳೋರಿಲ್ಲ. ಕಳೆದ ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ವಿರುದ್ಧ ಕೋಮುವಾದ ಎಂದು ವಿರೋಧಿಸಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಮೇಲೆ ಕೋಮುವಾದ ಹತ್ತಿಕ್ಕುವಲ್ಲಿಯೂ ವಿಫಲವಾಗಿದೆ. ರಾಜ್ಯದಲ್ಲಿ ಪರ್ಯಾಯ ವ್ಯವಸ್ಥೆ ಬೇಕಿದೆ. ನಮಗೆ ಅಧಿಕಾರದ ಬಗ್ಗೆ ಕಾಳಜಿಯ ಬದಲು ಜನರ ಬಗ್ಗೆ ಕಾಳಜಿ ಇರುವ ಸರ್ಕಾರ ಬೇಕಿದೆ ಅಂತ ಅಭಿಪ್ರಾಯಪಟ್ಟರು.
2021ರ ಮೇ ತಿಂಗಳಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆ್ಯಕ್ಸಿಜನ್ ಕೊರತೆಯಿಂದ 37 ಮಂದಿ ಮೃತಪಟ್ಟಿದ್ದರು. ಅಧಿಕಾರಕ್ಕೆ ಬಂದರೆ ಸಂತ್ರಸ್ತರಿಗೆ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಭರವಸೆ ನೀಡಿದ್ದ ರಾಹುಲ್ ‌ಗಾಂಧಿ ಈಗ ಸುಮ್ಮನಿದ್ದಾರೆ. 3 ವರ್ಷ ಕಳೆದರೂ ಭರವಸೆ ಈಡೇರಿಲ್ಲ. ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಎಲ್ಲ ಭರವಸೆ ಈಡೇರಿಸಬೇಕು ಎಂದು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!