Monday, November 16, 2026
Homeಕರ್ನಾಟಕCommercial Cylinder Price: ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ!

Commercial Cylinder Price: ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ!

ಬೆಂಗಳೂರು: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಇಂದಿನಿಂದ (ಅ.1) ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 62.50 ರೂ. ಹೆಚ್ಚಿಸಲಾಗಿದೆ.
ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಾಗಿದ್ದು, ಹಬ್ಬದ ಸೀಸನ್‌ಗೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.  19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಾಗಿದ್ದು, ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಡಾಬಾಗಳಲ್ಲಿ ನಿರ್ವಹಣಾ ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ.
ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 62.50 ರೂ.ಗಳಷ್ಟು ಏರಿಕೆಯಾಗಿ 2,810 ರೂ. ತಲುಪಿದೆ. ಇದಕ್ಕೂ ಮುನ್ನ ಸೆಪ್ಟೆಂಬರ್‌ನಲ್ಲಿ 2,747.50 ರೂಪಾಯಿಗಳಷ್ಟಿತ್ತು. ಇಂದಿನಿಂದಲೇ ಹೊಸ ದರ ಜಾರಿಯಾಗಲಿದ್ದು, ಗೃಹಬಳಕೆ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಯಾಗಿವೆ.
Telegram Group
Join Now
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!