ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ 5ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಸಲು ಸರ್ಕಾರ ಮೀನಾ-ಮೇಷ ಎಣಿಸುತ್ತಾ ಇರೋದ್ರಿಂದ ಹೋರಾಟ ಮುಂದುವರೆಸೋದಾಗಿ ಗುಲಾಬಿ ಸೇನೆ ನಿರ್ಧರಿಸಿದೆ.
ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಐದು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ತಮ್ಮ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಮಗೆ 15 ಸಾವಿರ ರೂಪಾಯಿ ಗೌರವಧನ ನೀಡುವ ಕುರಿತು ಸರ್ಕಾರದ ಆದೇಶದ ಪ್ರತಿ ನೀಡಬೇಕು. ಬೇಡಿಕೆ ಈಡೇರುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
