Tuesday, November 24, 2026
Homeಗ್ರೇಟರ್ ಬೆಂಗಳೂರುASHA Workers Protest: ಏಳನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತರ ಪ್ರತಿಭಟನೆ: ಈವರೆಗೆ 17 ಮಂದಿ...

ASHA Workers Protest: ಏಳನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತರ ಪ್ರತಿಭಟನೆ: ಈವರೆಗೆ 17 ಮಂದಿ ಅಸ್ವಸ್ಥ!

Telegram Group
Join Now

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಏಳನೇ ದಿನಕ್ಕೆ ಕಾಲಿಟ್ಟಿದೆ.

ಹಗಲು-ರಾತ್ರಿ ಎನ್ನದೇ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರು ಈಗ ಇವರಲ್ಲಿ 17 ಮಂದಿ ಅಸ್ವಸ್ಥಗೊಂಡಿದ್ದು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸೂಕ್ತ ಮೂಲಸೌಕರ್ಯ, ಕುಡಿಯುವ ನೀರು, ಶೌಚಾಲಯ ಹಾಗೂ ವಿಶ್ರಾಂತಿ ವ್ಯವಸ್ಥೆಗಳ ಕೊರತೆಯೂ ಕಾರ್ಯಕರ್ತೆಯರ ಸಂಕಷ್ಟವನ್ನು ಹೆಚ್ಚಿಸಿದೆ.

ಪ್ರತಿಭಟನೆ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಮನವಿ ಮಾಡಿದ್ದರು. ಬೇಡಿಕೆಗಳನ್ನು ಸಚಿವ ಸಂಪುಟ ಸಭೆ ಹಾಗೂ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದರು. ಆರೋಗ್ಯ ಸಚಿವ ಯು.ಟಿ. ಖಾದರ್ ಕೂಡ ಅಧಿವೇಶನದ ಬಳಿಕ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದರು. ಆದರೆ ಮೌಖಿಕ ಭರವಸೆಗಳಿಗೆ ಒಪ್ಪದ ಕಾರ್ಯಕರ್ತೆಯರು, ಅಧಿಕೃತ ಲಿಖಿತ ಆದೇಶ ಹೊರಬೀಳುವವರೆಗೂ ಧರಣಿ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಬಿಕ್ಕಟ್ಟು ಯಾವಾಗ ಬಗೆಹರಿಯಲಿದೆ ಎಂಬುದು ಕಾದುನೋಡಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!