ಬೆಂಗಳೂರು: ಫ್ರೀಡಂ ಫಾರ್ಕ್‌ನಲ್ಲಿ ಹಗಲು-ರಾತ್ರಿ ಎನ್ನದೇ ನಿರಂತರವಾಗಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ಕಳೆದ ದಿನ ನಡೆಸಿದ ಸಿಎಂ ಡಿಕೆ ಶಿವಕುಮಾರ್ ನಡುವಿನ ಮಾತುಕತೆ ಸಹ ವಿಫಲವಾಗಿದ್ದು, ಇದೀಗ ಆಶಾ ಕಾರ್ಯಕರ್ತೆಯರ ಪರ ಎಲ್ಲಡೆ ಬೆಂಬಲ ಕೇಳಿಬರುತ್ತಿದೆ.
ಹೌದು, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ಸೂಚಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗವಾಗಿ ಪತ್ರ ಬರೆದಿರುವ ಅವರು, ಮಹಿಳೆಯರ ಕಷ್ಟವನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ ಶೀಘ್ರ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಹಲವು ದಿನಗಳಿಂದ ಚಳಿಯನ್ನೂ ಲೆಕ್ಕಿಸದೆ, ಬಯಲಿನಲ್ಲಿಯೇ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿರುವ ಈ ಮಹಿಳೆಯರ ಪರಿಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿದೆ. ಆದ್ದರಿಂದ ತಾವು ವೈಯಕ್ತಿಕವಾಗಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ, ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಹಾಗೆ ಅವರ ₹15,000 ಗೌರವಧನ ಹೆಚ್ಚಳದ ಬೇಡಿಕೆಯನ್ನು ಮಾನವೀಯತೆ ಮತ್ತು ಸಹಾನುಭೂತಿಯಿಂದ ಪರಿಗಣಿಸಿ ಶೀಘ್ರವಾಗಿ ನ್ಯಾಯ ಒದಗಿಸಬೇಕೆಂದು ಹೃತ್ಪೂರ್ವಕವಾಗಿ ಮನವಿ ಮಾಡುತ್ತೇನೆ. ತಮ್ಮ ಸಮಯೋಚಿತ ಮಧ್ಯಪ್ರವೇಶದಿಂದ ಈ ಮಹಿಳೆಯರ ಹೋರಾಟಕ್ಕೆ ಸಕಾರಾತ್ಮಕ ಪರಿಹಾರ ದೊರೆತು, ಅವರು ಗೌರವಯುತವಾಗಿ ತಮ್ಮ ಮನೆಗಳಿಗೆ ಮರಳುವಂತಾಗಲಿ ಎಂದು ಆಶಿಸುತ್ತೇನೆ ಎಂದು ಬರೆದಿದ್ದಾರೆ.
ಸುಮಲತಾ ಅಂಬರೀಷ್ ಬೆಂಬಲಕ್ಕೂ ಮುನ್ನವೇ ನಟಿ ರಮ್ಯಾ ಸಹ ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ನಟಿ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದಾರೆ.
