ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಪಕ್ಷದ ಮುಖಂಡರು, ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ
ಒಂದೆಡೆ ಉಚಿತ ಭಾಗ್ಯಗಳ ಹೆಸರಿನಲ್ಲಿ ಜನರನ್ನು ಸೆಳೆಯುತ್ತಾ, ಮತ್ತೊಂದೆಡೆ ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಜನವಿರೋಧಿ ನೀತಿಗಳು ಹಾಗೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆಯನ್ನು ಖಂಡಿಸಿ ಈ ಪ್ರತಿಭಟನೆ
