ಬೆಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗಳಿಗೆ ಸರ್ಕಾರದಿಂದ ಮಹತ್ವದ ಸ್ಪಂದನೆ ಸಿಗುವ ನಿರೀಕ್ಷೆ ಗರಿಗೆದರಿದೆ.
ಇಂದಿನ ಕ್ಯಾಬಿನೆಟ್ ಸಭೆಯ ಅಜೆಂಡಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ 16 ಪ್ರಮುಖ ವಿಚಾರಗಳು ಸ್ಥಾನ ಪಡೆದುಕೊಂಡಿದ್ದು, ವಿಸ್ತೃತ ಚರ್ಚೆ ನಡೆಯಲಿದೆ.
ಕರಾವಳಿ ಭಾಗದ ಆರ್ಥಿಕ, ಸಾಮಾಜಿಕ ಹಾಗೂ ಕೈಗಾರಿಕಾ ಪ್ರಗತಿಗೆ ವೇಗ ನೀಡಲು ಸರ್ಕಾರವು ಮಹತ್ವಾಕಾಂಕ್ಷೆಯ ಸಮಗ್ರ ಅಭಿವೃದ್ಧಿ ‘ಬ್ಲೂ ಪ್ರಿಂಟ್’ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಗಣ್ಯರ ಭದ್ರತೆ ಹಾಗೂ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.
