ಬೆಂಗಳೂರು: ಸಾಲ ಮನ್ನಾ ಅಷ್ಟು ಸುಲಭದ ಕೆಲಸವಲ್ಲ. ಬೇರೆ ರಾಜ್ಯಗಳು ಮಾಡದೇ ಇದ್ದಾಗಲೂ ನಾವು ಸಾಲಮನ್ನಾ ಮಾಡಿದ್ದೇವೆ. ಈಗಲೂ ರೈತರ ಬೇಡಿಕೆಯನ್ನು ಸರ್ಕಾರ ಪರಿಶೀಲನೆ ಮಾಡಲಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಇದೇ ವೇಳೆ, ಗ್ರಾಮೀಣ ಭಾಗದ ಜನರು ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ನಗರಗಳಿಗೆ ವಲಸೆ ಹೋಗುವುದನ್ನು ತಡೆಯಲು ಸರ್ಕಾರ ಮಹತ್ವದ ಕ್ರಮಗಳನ್ನು ಘೋಷಿಸಿದೆ. ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಮೂಲಕ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಯೋಜನೆ ರೂಪಿಸಲಾಗಿದೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ 2,000 ಸಿಎಸ್ಆರ್ ಶಾಲೆಗಳನ್ನು ನಿರ್ಮಿಸಿ ಗುಣಮಟ್ಟದ ಶಿಕ್ಷಣ ಒದಗಿಸುವ ಗುರಿ ಹೊಂದಲಾಗಿದೆ. ಖಾಸಗಿ ವಲಯದ ಉದ್ಯೋಗಾವಕಾಶಗಳನ್ನು ಯುವಕರಿಗೆ ಸಂಪರ್ಕಿಸುವ ಉದ್ದೇಶದಿಂದ ‘ಯುವ ಸೇತು’ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಕೌಶಲ್ಯಾಧಾರಿತ ತರಬೇತಿ ನೀಡಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
