Wednesday, September 30, 2026
Homeಕ್ರೈಮ್ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳ ರೀಫಿಲ್ಲಿಂಗ್ ವೇಳೆ ಸ್ಫೋಟ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳ ರೀಫಿಲ್ಲಿಂಗ್ ವೇಳೆ ಸ್ಫೋಟ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

Telegram Group
Join Now

ಬೆಂಗಳೂರು: ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ರೀಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಸರಣಿಯಾಗಿ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿರುವ ಘಟನೆ  ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಅನಾಹುತವೊಂದು ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಫೋಟದ ತೀವ್ರತೆಗೆ ಒಂದು ಸಿಲಿಂಡರ್ ಹಾರಿ ಸಮೀಪದ ಶಾಲೆಯ ಕಿಟಕಿಗೆ ಅಪ್ಪಳಿಸಿದೆ. ಈ ಘಟನೆ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಬಳಿ, ಕಗ್ಗದಾಸಪುರದಲ್ಲಿ ಸಂಭವಿಸಿದೆ. ಸ್ಫೋಟದ ತಕ್ಷಣವೇ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು.

ಸ್ಥಳಕ್ಕೆ  ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಸ್ಥಳದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!