ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ಗೆ 8 ರೂ. ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದ್ದು, ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಿಎಂ ಬೆಲೆ ಏರಿಕೆ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಅನುಮತಿ ಕೋರಲಿದ್ದಾರೆ.
ಇಂದು ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಒಪ್ಪಿಗೆ ಸೂಚಿಸಲಾಗಿದೆ. ಪ್ರತಿ ಲೀಟರ್ಗೆ 8 ರೂ.ರಷ್ಟು ಏರಿಕೆ ಮಾಡಲು ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಪರಿಷತ್ ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಬೆಲೆ ಏರಿಕೆ ಜಾರಿಗೆ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ.
ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.
