Friday, November 6, 2026
Homeಕ್ರೈಮ್ರಾಜ್ಯ ರಾಜಧಾನಿಯಲ್ಲಿ ಬೆಚ್ಚಿಬಿದ್ದ ಘಟನೆ: ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ

ರಾಜ್ಯ ರಾಜಧಾನಿಯಲ್ಲಿ ಬೆಚ್ಚಿಬಿದ್ದ ಘಟನೆ: ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ

Telegram Group
Join Now

ರಾಜಧಾನಿ ಬೆಂಗಳೂರಿನಲ್ಲಿ ಇಡೀ ನಗರವೇ ಬೆಚ್ಚಿಬೀಳುವಂತಹ ಭೀಕರ ಸಾಮೂಹಿಕ ಹತ್ಯಾಕಾಂಡ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ .

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಇಂದುಶೇಖರ್‌ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದು, ಎರಡು ದಿನಗಳ ಹಿಂದೆ ನಡೆದಿದ್ದ ಹತ್ಯಾಕಾಂಡ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯ ಪತ್ನಿ ಸುನೀತಾ, ಅತ್ತೆ ರೂಪಾವತಿ, ಭಾವಮೈದುನರಾದ ಶಿವಕುಮಾರ್ ಮತ್ತು ಶಂಕರ್, ಅವರ ಪತ್ನಿಯರಾದ ದಿವ್ಯಾ ಮತ್ತು ನಳಿನಿ, ಹಾಗೂ ಶಿವಕುಮಾರ್ ಅವರ 7 ವರ್ಷದ ಮಗ ಪುನೀತ್ ನನ್ನು ಕೊಲೆಗೈದಿದ್ದಾನೆ.ಪತ್ನಿಯ ಕುಟುಂಬದವರು ತಮ್ಮ ಸಂಸಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಕೋಪದಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ. ಕಳೆದೆರಡು ದಿನಗಳಲ್ಲಿ ಇಡೀ ಕುಟುಂಬದ ಸದಸ್ಯರನ್ನು ಒಬ್ಬೊಬ್ಬರನ್ನಾಗಿ ತನ್ನ ಮನೆಗೆ ಕರೆಸಿಕೊಂಡು, ರುಬ್ಬುಗುಂಡಿನಿಂದ ಹೊಡೆದು ಬರ್ಬರವಾಗಿ ಕೊಂದಿದ್ದಾನೆ

ಪೂರ್ವಯೋಜಿತವಾಗಿ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿ, ಮೊದಲು ಪತ್ನಿಯನ್ನು ತನ್ನ ಮನೆಯಲ್ಲೇ ರುಬ್ಬುಗುಂಡಿನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಆಕೆಯ ಕುಟುಂಬದವರಿಗೆ ಅನುಮಾನ ಬಾರದಂತೆ ಸುನೀತಾ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಳೆ ಎಂದು ಸುಳ್ಳು ಹೇಳಿದ್ದಾನೆ. ನಂತರ ಮದ್ಯಪಾನದ ನೆಪದಲ್ಲಿ ಬಾಮೈದರಾದ ಶಿವಕುಮಾರ್ ಮತ್ತು ಶಂಕರ್, ಅವರ ಪತ್ನಿಯರಾದ ನಳಿನಿ, ದಿವ್ಯಾ, ಅತ್ತೆ ರೂಪವತಿ ಹಾಗೂ ಬಾಲಕ ಪುನೀತ್‌ನನ್ನು ಸೇರಿದಂತೆ ಕಳೆದ 15-20 ದಿನಗಳಿಂದ ಒಬ್ಬೊಬ್ಬರನ್ನೇ ಕರೆಸಿ  ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುಟುಂಬದ ಸದಸ್ಯರು ಕಾಣೆಯಾದ ಹಿನ್ನೆಲೆಯಲ್ಲಿ ನಳಿನಿ ಅವರ ತಾಯಿ ಶ್ರೀರಾಮಪುರ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿ ಆರೋಪಿ ಇಂದುಶೇಖರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಭೀಕರ ಸರಣಿ ಹತ್ಯಾಕಾಂಡ ಹೊರಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!