ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ನಿರ್ದೇಶನದ ಮೇರೆಗೆ ಪ್ರಕರಣದ ಮರುತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಐಜಿಪಿ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಈ ವಿಶೇಷ ತನಿಖಾ ದಳ ಕಾರ್ಯನಿರ್ವಹಿಸಲಿದ್ದು, ತಂಡದಲ್ಲಿ ಅನುಭವಿ ಉನ್ನತ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್, ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರಿದ್ದಾರೆ.
