Saturday, July 18, 2026
Homeಆರೋಗ್ಯHDD Wife Health Condition Critical: ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ...

HDD Wife Health Condition Critical: ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

Telegram Group
Join Now

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ನುರಿತ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.

ನಿನ್ನೆ (ಜು.17) ಚೆನ್ನಮ್ಮ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರಲ್ಲಿ ಆತಂಕ ಮೂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಧಾವಿಸಿದ ಪತಿ ಹೆಚ್.ಡಿ.ದೇವೇಗೌಡರು, ಪುತ್ರರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ವೈದ್ಯರನ್ನು ಭೇಟಿ ಮಾಡಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆ, ತಾವು ನಂಬಿದ ದೇವರೇ ಇನ್ನು ಕಾಪಾಡಬೇಕು ಎಂದು ಕುಟುಂಬಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಉಸಿರಾಟದ ತೊಂದರೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಚೆನ್ನಮ್ಮ ಅವರಿಗೆ ತಜ್ಞ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿದೆ. ಸೊಸೆ ಭವಾನಿ ರೇವಣ್ಣ ಅವರು ರಾತ್ರಿಯಿಡೀ ಆಸ್ಪತ್ರೆಯಲ್ಲೇ ಉಳಿದು ಅತ್ತೆಯ ಆರೋಗ್ಯ ನೋಡಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments