Friday, November 20, 2026
Homeಕರ್ನಾಟಕCauvery River Dispute: ಕಾವೇರಿ ನದಿ ನೀರು ವಿವಾದದಲ್ಲಿ ಕರ್ನಾಟಕಕ್ಕೆ ದೊಡ್ಡ ಗೆಲುವು, ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿಗೆ...

Cauvery River Dispute: ಕಾವೇರಿ ನದಿ ನೀರು ವಿವಾದದಲ್ಲಿ ಕರ್ನಾಟಕಕ್ಕೆ ದೊಡ್ಡ ಗೆಲುವು, ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿಗೆ ಭಾರೀ ಹಿನ್ನಡೆ!

Telegram Group
Join Now

ಬೆಂಗಳೂರು: ಕಾವೇರಿ ನದಿ ನೀರು ವಿವಾದದಲ್ಲಿ ತಮಿಳುನಾಡಿಗೆ ಸುಪ್ರೀಂ ಕೋರ್ಟ್‌ನಲ್ಲಿ  ಮತ್ತೊಮ್ಮೆ ಹಿನ್ನಡೆಯಾಗಿದೆ. ಕರ್ನಾಟಕವು ಹೆಚ್ಚುವರಿ 11 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಅಪರೇಶ್ ಸಿಂಗ್  ಅವರಿದ್ದ ಪೀಠ ಈ ಆದೇಶವನ್ನು ನೀಡಿದೆ. ಆದೇಶ ಪ್ರಕಟಿಸುವ ಮೊದಲು ನ್ಯಾಯಮೂರ್ತಿ ನಾಥ್ ಅವರು, ತಮಿಳುನಾಡು ಇಂದು ಮೂರನೇ ಅರ್ಜಿಯನ್ನು ಸಲ್ಲಿಸಿದೆ ಎಂದು ಗಮನಿಸಿ, ಅದನ್ನೂ ಸಹ ವಜಾಗೊಳಿಸಲಾಗುವುದು ಎಂದು ಮೌಖಿಕವಾಗಿ ಹೇಳಿದರು.

ʻಸುಪ್ರೀಂʼ ಆದೇಶದಿಂದ ಕರ್ನಾಟಕಕ್ಕೆ ತುಸು ನಿರಾಳತೆ ಸಿಕ್ಕಂತಾಗಿದೆ. ಈಗಾಗ್ಲೇ ಮಳೆ ಕೊರತೆಯಿಂದ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಪಾತಾಳಕ್ಕೆ ಕುಸಿದಿದ್ದು, ಕುಡಿಯುವ ನೀರು ಹಾಗೂ ಕೃಷಿ ಬಳಕೆಗೆ ನೀರಿನ ಅಭಾವ ಎದುರಾಗುವ ಆತಂಕವಿದೆ. ಸುಪ್ರೀಂ ಆದೇಶ ಕರ್ನಾಟಕಕ್ಕೆ ಸದ್ಯದ ಮಟ್ಟಿಗೆ ಸಮಾಧಾನ ತಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!