Friday, July 17, 2026
Homeಕರ್ನಾಟಕGoddess Chamundi: ಇಂದು ಆಷಾಢ ಮಾಸದ ಮೊದಲ ಶುಕ್ರವಾರ: ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಭಿಷೇಕ, ಪೂಜೆ:...

Goddess Chamundi: ಇಂದು ಆಷಾಢ ಮಾಸದ ಮೊದಲ ಶುಕ್ರವಾರ: ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಭಿಷೇಕ, ಪೂಜೆ: ಭಕ್ತರಿಗಾಗಿ ಬಿಗಿ ಪೊಲೀಸ್‌ ಬಂದೋಬಸ್ತ್

Telegram Group
Join Now

ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ  ಸಂಭ್ರಮ. ಚಾಮುಂಡೇಶ್ವರಿ ತಾಯಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದೆ. ಮುಂಜಾನೆ 3.30ರಿಂದಲೇ ವಿಶೇಷ ಅಭಿಷೇಕ, ಪೂಜಾ ವಿಧಾನಗಳನ್ನು ನೆರವೇರಿಸಲಾಗಿದೆ,

ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. 

ಇನ್ನು ತಾಯಿಯನ್ನು ಕಣ್ತುಂಬಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು,
ಚಾಮುಂಡಿ ತಾಯಿಗೆ ವಿಶೇಷ ಪೂಜೆ, ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ಭಕ್ತರಿಗೆ ಪೊಲೀಸ್ ಸರ್ಪಗಾವಲಲ್ಲಿ ಚಾಮುಂಡಮ್ಮನ ದರ್ಶನಕ್ಕೆ ಅವಕಾಶ ನೀಡಲಾಯಿತು. ಚಾಮುಂಡಿ ತಾಯಿಯ ಉತ್ಸವ ಮೂರ್ತಿಗೆ ವಿಶೇಷ ಅಲಾಂಕರ ಮಾಡಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ತೆರಳಲು ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಲಾಗಿದ್ದು, ತಾಯಿ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ಇಂದು ಮುಂಜಾನೆಯಿಂದಲೇ ಮೈಸೂರು ಸಿಟಿ ಬಸ್‌ ನಿಲ್ದಾಣ ಹಾಗೂ ಲಲಿತ್‌ ಮಹಲ್‌ ಹೆಲಿಪ್ಯಾಡ್‌ನಿಂದ ಚಾಮುಂಡಿ ಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು  ವ್ಯವಸ್ಥೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments