Wednesday, October 21, 2026
Homeಕರ್ನಾಟಕMysore Dasara: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ!

Mysore Dasara: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ!

Telegram Group
Join Now

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಾಂಸ್ಕೃತಿಕ ನಗರಿಯ ಅರಮನೆ ಸಜ್ಜಾಗಿದೆ. ಇಂದು ಸಂಜೆ 4:10ರಿಂದ 4:35ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಶುಭಾರಂಭಗೊಳ್ಳಲಿದೆ.

ಇದಕ್ಕೂ ಮುನ್ನ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಮಧ್ಯಾಹ್ನ 01:36ರಿಂದ 01:56ರವರೆಗೆ ಸಲ್ಲುವ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿ ಕಂಬಕ್ಕೆ ಪೂಜೆ ಸಲ್ಲಿಸಿ, ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಬಳಿಕ ಗಣ್ಯರು ಅರಮನೆ ಮುಂಭಾಗದ ವಿಐಪಿ ತಳದಲ್ಲಿ ಆಸೀನರಾದ ನಂತರ ದಸರಾ ಮೆರವಣಿಗೆ ಸಾಗಲಿದೆ. ಇದರಲ್ಲಿ ನಿಶಾನೆ ಆನೆ ಅಭಿಮನ್ಯು ಈ ಮೆರವಣಿಗೆಯನ್ನು ಮುನ್ನಡೆಸಲಿದ್ದು, ಬಳಿಕ ಸಾಲಾನೆಗಳು, ಕಲಾತಂಡಗಳು, ಸ್ತಬ್ಧ ಚಿತ್ರಗಳು ಹಾಗೂ ಪೊಲೀಸ್ ಬ್ಯಾಂಡ್ ಸೇರಿದಂತೆ ವಿವಿಧ ಪ್ರಕಾರದ ತಂಡಗಳು ಮೆರವಣಿಗೆ ಹೊರಡಲಿವೆ. ಸಂಜೆ 04:10ರಿಂದ 04:35ರವರೆಗಿನ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇತರು ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಬನ್ನಿಮಂಟಪದವರೆಗೆ ಆನೆ ಪ್ರಶಾಂತ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!