Friday, October 23, 2026
Homeಕರ್ನಾಟಕಸೌದಿ ಅರೇಬಿಯಾದ ಮೆಕ್ಕಾದಲ್ಲಿ ಸಿಲುಕಿರುವ ಸಾವಿರಾರು ಕನ್ನಡಿಗರು: ನೆರವಿಗೆ ಧಾವಿಸುವಂತೆ ವಿಡಿಯೋ ಮೂಲಕ ಸಿಎಂಗೆ ಮನವಿ!

ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಸಿಲುಕಿರುವ ಸಾವಿರಾರು ಕನ್ನಡಿಗರು: ನೆರವಿಗೆ ಧಾವಿಸುವಂತೆ ವಿಡಿಯೋ ಮೂಲಕ ಸಿಎಂಗೆ ಮನವಿ!

Telegram Group
Join Now

ಚಿಕ್ಕಮಗಳೂರು: ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಸಿಲುಕಿರುವ 4,000 ಕನ್ನಡಿಗರ ನೆರವಿಗೆ ಧಾವಿಸುವಂತೆ ಕನ್ನಡಿಗರೊಬ್ಬರ ವಿಡಿಯೋ ವೈರಲ್ ಆಗಿದೆ. 4,000 ಕನ್ನಡಿಗರು ಮೆಕ್ಕಾ ಯಾತ್ರೆಗೆ ತೆರಳಿದ್ದಾರೆ. ಆದರೆ ವಿಮಾನಗಳ ಹಾರಾಟ ರದ್ದು ಹಿನ್ನೆಲೆ ತವರಿಗೆ ಮರಳಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಚಿಕ್ಕಮಗಳೂರು ಮೂಲದ ಅಫ್ಸರ್​​ ಎಂಬುವವರು ಕನ್ನಡಿಗರ ನೆರವಿಗೆ ಧಾವಿಸುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಮಧ್ಯಮ ವರ್ಗ ಹಾಗೂ ಕೆಳ ವರ್ಗದ ಜನರಿಗೆ ಸರ್ಕಾರ ಸ್ಪಂದಿಸಬೇಕು. ಕನ್ನಡಿಗರನ್ನ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕ್ರಮಕೈಗೊಳ್ಳಬೇಕು ಎಂದಿದ್ದಾರೆ. ಹಾಗೆ ವಿದೇಶಾಂಗ ಸಚಿವಾಲಯ ಕೂಡಲೇ ಕ್ರಮ ಕೈಗೊಳ್ಳಬೇಕು. ಸಿಎಂ ಡಿ.ಕೆ. ಶಿವಕುಮಾರ್ ತಕ್ಷಣ ಮಧ್ಯ ಪ್ರವೇಶಿಸಬೇಕು. ವಿಶೇಷ ವಿಮಾನದ ಮೂಲಕ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಬೇಕು ಎಂದು ಅಪ್ಸರ್‌ ಮನವಿ ಮಾಡಿದ್ದಾರೆ.

ಅ.8 ರಂದು ರಿಯಾದ್ ಏರ್‌ಪೋರ್ಟ್‌ ಮೇಲೆ ಇರಾನ್ ಬೆಂಬಲಿತ ಯೆಮೆನ್‌ನ ಹೌತಿ ಬಂಡುಕೋರರ ಗುಂಪು ಕ್ಷಿಪಣಿ ದಾಳಿ ನಡೆಸಿದ್ದಾಗಿ ಹೇಳಿಕೊಂಡಿತ್ತು. ಈ ಬೆಳವಣಿಗೆಯಿಂದ ಪ್ರದೇಶದಲ್ಲಿ ಈಗಾಗಲೇ ಇರುವ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿತ್ತು. ಇದಾದ ಬಳಿಕ ವಿಮಾನ ನಿಲ್ದಾಣವನ್ನು ಬಂದ್‌ ಮಾಡಲಾಗಿತ್ತು. ನವೆಂಬರ್ 4ರವರೆಗೆ ಸೌದಿ ಏರ್‌ಲೈನ್ಸ್, ಇಂಡಿಗೋ ವಿಮಾನಗಳ ಹಾರಾಟ ಮುಂದೂಡಿಕೆ ಮಾಡಲಾಗಿದೆ ಎನ್ನಲಾಗಿದೆ.

ಸಿಎಂ ಡಿಕೆ ಶಿವಕುಮಾರ್ ತಕ್ಷಣ ಮಧ್ಯಪ್ರವೇಶಿಸಬೇಕು. ವಿಶೇಷ ವಿಮಾನಗಳ ವ್ಯವಸ್ಥೆ ಮಾಡಬೇಕು. ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸುವಂತೆ ಅವರು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!