Friday, August 7, 2026
Homeಕರ್ನಾಟಕಕೋರ್ಟ್‌ʼನಲ್ಲಿ ಗೆಲುವು, ಸಂಪುಟದಲ್ಲಿ ನಿರಾಸೆ: ಈ ನಡುವೆ ಗಾಯಿತ್ರಿ ಶಾಂತೇಗೌಡ ಇಂದು MLC ಆಗಿ...

ಕೋರ್ಟ್‌ʼನಲ್ಲಿ ಗೆಲುವು, ಸಂಪುಟದಲ್ಲಿ ನಿರಾಸೆ: ಈ ನಡುವೆ ಗಾಯಿತ್ರಿ ಶಾಂತೇಗೌಡ ಇಂದು MLC ಆಗಿ ಪ್ರಮಾಣ ವಚನ!

Telegram Group
Join Now

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಇಂದು ಬೆಂಗಳೂರಿನ ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಹಿತೈಷಿಗಳು ಗಾಯತ್ರಿ ಶಾಂತೇಗೌಡ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದು, ವಿಧಾನ ಪರಿಷತ್ ಸದಸ್ಯೆಯಾಗಿ ಅವರ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಜನಸೇವೆಗೆ ಮತ್ತಷ್ಟು ಕೊಡುಗೆ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾನೂನು ಸಮರದ ಐತಿಹಾಸಿಕ ಗೆಲುವಿನಲ್ಲೇ ವಿಧಾನ ಪರಿಷತ್‌ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಟ್ಟಿಯಲ್ಲಿ ಅವರ ಹೆಸರು ಪ್ರಕಟವಾಗಿದ್ದು ಅಚ್ಚರಿ ಮೂಡಿಸಿತ್ತು. ಆದರೆ ರಾಜಕೀಯ ಕ್ಷಿಪ್ರ ಬೆಳವಣಿಗೆಯಿಂದಾಗಿ ಅಂತಿಮ ಘಟ್ಟದಲ್ಲಿ ಅವರ ಹೆಸರು ಕೈಬಿಡುವಂತಾಯಿತು. ಹೀಗಾಗಿ ಅವರಿಗೆ ಭಾರಿ ನಿರಾಸೆ ಮೂಡಿಸಿದೆ. ಸಚಿವೆ ಆಗೋಗದರಲ್ಲಿ ಸ್ವಲ್ಪದರಲ್ಲಿಯೇ ತಪ್ಪಿ ಹೋಗಿದ್ದಕ್ಕೆ ಅವರ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments