ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್ ಪೇಜ್‌ನ ಅಡ್ಮಿನ್ ಅನ್ನೋದು ಬೆಳಕಿಗೆ ಬಂದಿದೆ.
ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.
