Wednesday, July 1, 2026
Homeಜಿಲ್ಲಾಸುದ್ದಿನ್ಯಾ. ವೇದವ್ಯಾಸಾಚಾರ್ ಶ್ರೀಶಾನಂದ ಹೇಳಿಕೆ ವಿವಾದ - ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ...

ನ್ಯಾ. ವೇದವ್ಯಾಸಾಚಾರ್ ಶ್ರೀಶಾನಂದ ಹೇಳಿಕೆ ವಿವಾದ – ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ – ಸುಪ್ರೀಂ ಕೋರ್ಟ್‌

Telegram Group
Join Now

ನವದೆಹಲಿ : ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇಂದು ಮುಕ್ತಾಯಗೊಳಿಸಿದೆ. ನ್ಯಾಯಾಧೀಶರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಕೊನೆಗೊಳಿಸಿದೆ.
ಆಗಸ್ಟ್ 28 ರಂದು ನ್ಯಾಯಮೂರ್ತಿ ಶ್ರೀಶಾನಂದ ಅವರು ನಡೆಸಿದ ಕಲಾಪದ ವೇಳೆ ಬೆಂಗಳೂರು ಪಶ್ಚಿಮದಲ್ಲಿ ಮುಸ್ಲಿಂ ಪ್ರಾಬಲ್ಯವಿರುವ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಉಲ್ಲೇಖಿಸಿದ್ದರು. ಇದು ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗಿತ್ತು. ಅದಾದ ಬಳಿಕ ವೈರಲ್ ಆದ ಇನ್ನೊಂದು ವೀಡಿಯೊದಲ್ಲಿ ಮಹಿಳಾ ವಕೀಲರೊಬ್ಬರಿಗೆ ನ್ಯಾಯಮೂರ್ತಿಗಳು ಬಳಸಿದ ಪದದ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments