Tuesday, August 11, 2026
Homeಕ್ರೈಮ್ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ ಹೆಚ್ ಡಿ ರೇವಣ್ಣಗೆ ಮತ್ತೊಂದು ಶಾಕ್; ಮಾಜಿ ಸಚಿವರ...

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ ಹೆಚ್ ಡಿ ರೇವಣ್ಣಗೆ ಮತ್ತೊಂದು ಶಾಕ್; ಮಾಜಿ ಸಚಿವರ ವಿರುದ್ಧ ದಾಖಲಾಯ್ತು ಮತ್ತೊಂದು ದೂರು

Telegram Group
Join Now

ಮೈಸೂರು; ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ ಹೆಚ್ ಡಿ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ. ಮಾಜಿ ಸಚಿವರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

 ಮೈಸೂರು ಜಿಲ್ಲೆಯ ಕೆ ಆರ್ ನಗರದಲ್ಲಿ ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಮಾಜಿ ಸಚಿವ ಹೆಚ್​ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ನನ್ನ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

 ಈ ವಿಚಾರವಾಗಿ ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆ ಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿದ್ದು ಭಾರತಕ್ಕೆ ಬರಲು ವಿಳಂಬ ಮಾಡುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಕುರಿತು ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ್ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಪ್ರಜ್ವಲ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಸಹಕರಿಸದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ ಈ ಮೊದಲು ದಾಖಲಾಗಿರುವ ದೂರಿಗೆ ಸಂಬಂಧಪಟ್ಟಂತೆ ಹೆಚ್ ಡಿ ರೇವಣ್ಣ ಬೆಂಗಳೂರಿನ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments