Monday, August 4, 2025
!-- afp header code starts here -->
Homeರಾಜಕೀಯಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡಿ:  ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡಿ:  ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆ೦ಗಳೂರು (ಮೇ1):  ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬ೦ಧಪಟ್ಟ೦ತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ . ಈ ಪತ್ರದಲ್ಲಿ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರಂತೆ. ಪ್ರಜ್ವಲ್ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಮೂಲಕ ವಿದೇಶ ಪ್ರವಾಸ ಮಾಡುತ್ತಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್  ಮೂಲಕವೇ ಭಾರತದಿಂದ ಜರ್ಮನಿಗೆ ತೆರಳಿದ್ದು, ಈ ಪಾಸ್ ಪೋರ್ಟ್ ನಿ೦ದಾಗಿ ನವೆಂಬರ್‌ ತನಕ ವೀಸಾವಿಲ್ಲದೆ ಹಲವಾರು ದೇಶಗಳಿಗೆ ಪ್ರಯಾಣಿಸುವ ಅವಕಾಶವಿದೆ .ಹೀಗಾಗಿ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ, ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 

ಈ ಪ್ರಕರಣವನ್ನ SIT ತನಿಖೆ ನಡೆಸುತ್ತಿರುವುದರಿಂದ ಪ್ರಜ್ವಲ್ ರೇವಣ್ಣರನ್ನ  ಭಾರತಕ್ಕೆ ವಾಪಾಸ್ ಕರೆತರಬೇಕು. ಅವರನ್ನ ನಮ್ಮ ದೇಶದ ಕಾನೂನಿನ ಪ್ರಕಾರ ವಿಚಾರಣೆ ನಡೆಸಬೇಕು. ಹೀಗಾಗಿ ವಿದೇಶಾಂಗ ಸಚಿವಾಲಯಕ್ಕೆ ಈ ಬಗ್ಗೆ ಸೂಚನೆ ನೀಡಿ, ಅಂತರಾಷ್ಟ್ರೀಯ ಏಜೆನ್ಸಿ ಮೂಲಕ ಪ್ರಜ್ವಲ್ ರೇವಣ್ಣರನ್ನ ಕರೆತರಲು ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ಪ್ರಜ್ವಲ್ ರನ್ನ ಕರೆದುಕೊ೦ಡು ಬರಲು ಎಸ್ ಐಟಿ ತಂಡ ಸಂಪೂರ್ಣ ಸಹಕಾರ ನೀಡಲಿದೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!