ಹಾಸನ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿದ್ದ ಚೇತನ್ ಗೌಡ, ಲಿಖಿತ್ ಗೌಡಗೆ ಜಾಮೀನು ಮಂಜೂರಾಗಿದೆ.ಪೆನ್ ಡ್ರೈವ್ ಹಂಚಿಕೆ ಪ್ರಕರಣದ 6 ಮತ್ತು 7 ನೇ ಆರೋಪಿಗಳಾದ ಚೇತನ್, ಲಿಖಿತ್ ಗೌಡ ಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಗೌಡ ಹಾಗೂ ಚೇತನ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೇ.12ರಂದು ಬಂಧಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಗೂ ಜಾಮೀನು ಸಿಕ್ಕಿದೆ.

ಇನ್ನು ಪೆನ್ ಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಎಸ್ ಐಟಿ ಅಧಿಕಾರಿಗಳು ಏರ್ಪೋಟ್ ನಲ್ಲಿ ಬೀಡು ಬಿಟ್ಟಿದ್ದು ಪ್ರಜ್ವಲ್ ಬರುತ್ತಿದ್ದಂತೆ ಬಂಧಿಸುವ ಸಾಧ್ಯತೆಯಿದೆ.
