ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ 2026ರ ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ತನ್ನ ನಾಲ್ವರು ಅಭ್ಯರ್ಥಿಗಳ ಪಟ್ಟಿಯನ್ನು ಇಂದೇ ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಅವರು ಈ ಕೆಳಗಿನ ಅಭ್ಯರ್ಥಿಗಳ ಆಯ್ಕೆಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.
ಘೋಷಿತ ಅಭ್ಯರ್ಥಿಗಳ ವಿವರ:
- ಪಶ್ಚಿಮ ಪದವೀಧರ ಕ್ಷೇತ್ರ: ಮೋಹನ್ ಲಿಂಬಿಕಾಯಿ
- ಆಗ್ನೇಯ ಪದವೀಧರ ಕ್ಷೇತ್ರ: ಶಶಿ ಹುಲಿಕುಂಟೆಮಠ
- ಈಶಾನ್ಯ ಶಿಕ್ಷಕರ ಕ್ಷೇತ್ರ: ಶರಣಪ್ಪ ಮತ್ತೂರ್
- ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ
ವಿಧಾನ ಪರಿಷತ್ತಿನಲ್ಲಿ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಪದವೀಧರರು ಮತ್ತು ಶಿಕ್ಷಕರ ವಿಶ್ವಾಸ ಗಳಿಸಲು ಹಿರಿಯ ಹಾಗೂ ಅನುಭವಿ ನಾಯಕರನ್ನು ಕಣಕ್ಕಿಳಿಸಿದೆ.

