ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಹೊಳೆನರಸೀಪುರ ಶಾಸಕ ಮತ್ತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ ಐಟಿ ಬಂಧಿಸಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಲ್ಪಟ್ಟ ಬಳಿಕ ವಶಕ್ಕೆ ಪಡೆದ ಆಧಿಕಾರಿಗಳು ಎಸ್ ಐಟಿ ಕಚೇರಿಗೆ ಕರೆದೊಯ್ದಿದ್ದಾರೆ. ಎಸ್ ಐಟಿ ಅಧಿಕಾರಿಗಳು ಬಂದಾಗ ರೇವಣ್ಣ ತಾವೇ ಖುದ್ದಾಗಿ ಮನೆ ಬಾಗಿಲು ತೆರೆದಿದ್ದರು. ಕಿಡ್ನ್ಯಾಪ್ ಆಗಿದ್ದ ಮಹಿಳೆಯನ್ನು ಎಸ್ ಐಟಿ ಅಧಿಕಾರಿಗಳು ರಕ್ಷಣೆ ಮಾಡಿದ ಕೆಲವೇ ಹೊತ್ತಿನಲ್ಲಿ ಹೆಚ್.ಡಿ. ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಣೆಯಾಗಿತ್ತು.