ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಇಂದು ಪ್ರಕರಣದ ತನಿಖಾಧಿಕಾರಿ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಬಿ. ಜಿ. ಸುಬ್ಬಾಪೂರ ಮಠ್ ಅವರು ವಿಚಾರಣೆಗೆ ಹಾಜರಾಗುವಂತೆ ಪೂಂಜ ಮನೆಗೆ ತೆರಳಿ ನೋಟಿಸ್ ನೀಡಿದ್ದರು. ಅದರಂತೆ ಇದೀಗ ಹರೀಶ್ ಪೂಂಜ ವಿಚಾರಣೆಗೆ ಹಾಜರಾಗಿದ್ದಾರೆ.

ಸದ್ಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದು ಠಾಣೆಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಕೂಡ ಆಗಮಿಸಿದ್ದಾರೆ.
