ಮಾಜಿ ಸಚಿವ ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ .ಇವತ್ತು ಮಧ್ಯಾಹ್ನ ನ್ಯಾಯಾಲಯದಲ್ಲಿ ಹಾಸನದ ಹೊಳೆ ನರಸೀಪುರದ ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದ ವಿಚಾರಣೆ ನಡೆಯಲಿದೆ. ಇದೇ ಪ್ರಕರಣದಲ್ಲಿ ಜಾಮೀನು ಪಡೆಯಲು ನಿನ್ನೆ (ಮೇ 16 ಕ್ಕೆ।) ರೇವಣ್ಣ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ನ್ಯಾಯಾಲಯ ಅವ್ರಿಗೆ ಒಂದು ದಿನದ ಮಧ್ಯಂತರ ಜಾಮೀನು ನೀಡಿತ್ತು.
ಅತ್ಯಾಚಾರ ಸಂತ್ರಸ್ಥೆ ಅಪಹರಣ ಪ್ರಕರಣದಲ್ಲಿ , 6 ದಿನ ಜೈಲಿನಲ್ಲಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದಿದ್ದ ಎಚ್.ಡಿ. ರೇವಣ್ಣಗೆ ಈವತ್ತು ಮತ್ತೆ ಜಾಮೀನು ಸಿಗುತ್ತಾ ಅನ್ನೋ ಕುತೂಹಲ ಎಲ್ಲರಲ್ಲೂ ಇದೆ. ಯಾಕಂದರೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣನವರಿಗೆ ಜಾಮೀನು ನೀಡದಂತೆ ಎಸ್ಐಟಿ ಆಕ್ಷೇಪಣೆ ಅರ್ಜಿ ಸಲ್ಲಿಸಿದೆ. ಅಲ್ಲದೆ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಎಸ್ಐಟಿ ಕೇಳಿಕೊಂಡಿದೆ. ಎಸ್ಐಟಿ ಮನವಿಗೆ ರೇವಣ್ಣ ಪರ ವಕೀಲರಾದ ಸಿ.ವಿ. ನಾಗೇಶ್ ಆಕ್ಷೇಪಣೆ ಸಲ್ಲಿಸಿದ್ದಾರೆ.ಯಾಕಂದರೆ ಇದೊಂದು ಜಾಮೀನು ಸಹಿತ ಪ್ರಕರಣವಾಗಿದ್ದು, ನ್ಯಾಯಾಂಗ ಬಂಧನ ಸಮಂಜಸ ಅಲ್ಲ ಎಂದು ರೇವಣ್ಣ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಹೀಗಾಗಿ ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ಇವತ್ತು ಮಧ್ಯಾಹ್ನ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರು ಆಗದಿದ್ದರೆ ಮತ್ತೆ ರೇವಣ್ಣ ಬಂಧನವಾಗೋ ಸಾಧ್ಯತೆ ಇದೆ ಎನ್ನಲಾಗಿದೆ.