Karnataka BJP: ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

0
136

karnataka bjp: ಬೆಂಗಳೂರು: ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯದ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, (karnataka bjp:) ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು ಏಳು ಮೋರ್ಚಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಜೊತೆಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಆರು ಶಾಸಕರು, ವಿಧಾನಪರಿಷತ್‌ನ ಓರ್ವ ಸದಸ್ಯ, ಹತ್ತು ಮಾಜಿ ಶಾಸಕರಿಗೆ ಅವಕಾಶ ನೀಡಲಾಗಿದೆ.

ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗಿಲ್ಲ ಸ್ಥಾನಮಾನ:
ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಆದರೆ ಪಟ್ಟಿಯಲ್ಲಿ ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗರ ಸ್ಥಾನಮಾನ ದೊರಕಿಲ್ಲ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ 6 ಆಪ್ತರು, ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ವಿಜಯೇಂದ್ರರ ಇಬ್ಬರು ಆಪ್ತರಿಗೆ ಸ್ಥಾನ ನೀಡಲಾಗಿದೆ. ಬಿಜೆಪಿಗೆ ಬಂದಿದ್ದ 17 ವಲಸಿಗರ ಪೈಕಿ ಭೈರತಿ ಬಸವರಾಜ್ ಗೆ ಮತ್ತು 6 ಮಹಿಳೆಯರಿಗೆ ಸ್ಥಾನ ನೀಡಲಾಗಿದೆ. ಕಟೀಲು ಅವಧಿಯಲ್ಲಿನ bjp ಉಪಾಧ್ಯಕ್ಷರ ಪೈಕಿ ಒಬ್ಬರು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಎಂ.ರಾಜೇಂದ್ರ ಮುಂದುವರಿಕೆ ಮಾಡಲಾಗಿದ್ದು, ಕಟೀಲು ಅವಧಿಯಲ್ಲಿನ ನಾಲ್ವರು ಪ್ರಧಾನ ಕಾರ್ಯದರ್ಶಿಗಳ ಬದಲಾವಣೆ ಮಾಡಲಾಗಿದೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ:karnataka bjp:
ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ, ರಾಜೂ ಗೌಡ ನಾಯಕ್, ಎನ್. ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ನಾಯಕ್, ಡಾ. ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ. ರಾಜೇಂದ್ರ ನೇಮಕ ಮಾಡಲಾಗಿದೆ.

ಇದನ್ನೂ ಓದಿ; ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ

karnataka bjp:ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ:
ವಿ. ಸುನೀಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ್ ರೆಡ್ಡಿ ಮತ್ತು ಜೆ. ಪ್ರೀತಮ್ ಗೌಡ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here