Monday, August 4, 2025
!-- afp header code starts here -->
Homeರಾಜಕೀಯಬೆಂಗಳೂರು : ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರರ ರಾಜೀನಾಮೆ ಕೇಳಿಲ್ಲ : ಸಿಎಂ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರರ ರಾಜೀನಾಮೆ ಕೇಳಿಲ್ಲ : ಸಿಎಂ

ಬೆಂಗಳೂರು;ವಾಲ್ಮೀಕಿ ಅಭಿವೃದ್ಧಿ ನಿಗಮದ  87 ಕೋಟಿ ರೂಪಾಯಿ ಅವ್ಯವಹಾರ ಪ್ರಕರಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ .ನಾಗೇಂದ್ರ ಶಾಮೀಲಾಗಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಸಚಿವರ ಬಳಿ ರಾಜೀನಾಮೆಯನ್ನು ಕೇಳಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಪ್ರಾಥಮಿಕ ವರದಿ ಬಂದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅವ್ಯವಹಾರದ ಆರೋಪ ಬಂದ  ತಕ್ಷಣ ವಿರೋಧ ಪಕ್ಷದ  ಮುಖಂಡರು ಸಚಿವ ಬಿ .ನಾಗೇಂದ್ರರ ರಾಜೀನಾಮೆಗೆ ಒತ್ತಾಯಿಸಿದ್ದರು. ಅಲ್ಲದೆ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಸಚಿವರು ಪ್ರಕರಣದ ಮೇಲೆ ಪ್ರಭಾವ ಬೀರಬಹುದು, ಹೀಗಾಗಿ ಜೂನ್ 6 ರ ಒಳಗೆ ತಾವೇ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗಡುವು ನೀಡಿದ್ದರು. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಜೂನ್ 7ರಿಂದ ರಾಜ್ಯಾದ್ಯಂತ  ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ  ಮುಖ್ಯಮಂತ್ರಿಗಳು, ಈ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ , ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. 

 ಏನಿದು ಅವ್ಯವಹಾರ ?

ಕರ್ನಾಟಕ  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಲ್ಲಿದ್ದ 187 ಕೋಟಿ ಮೊತ್ತದಲ್ಲಿ 87 ಕೋಟಿ ರೂಪಾಯಿಯನ್ನು ನಿಗಮದ ಅಧ್ಯಕ್ಷರ ಗಮನಕ್ಕೆ ತರದೇ ಒಳಸಂಚು ಮಾಡಿ ಎಂ.ಜಿ ರಸ್ತೆ ಬ್ರಾಂಚ್ ನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ತನಗೆ ಗೊತ್ತಿಲ್ಲದೇ ಇಷ್ಟು ದೊಡ್ಡ ಮಟ್ಟದ ಅವ್ಯವಹಾರ ನಡೆದಿದ್ದಕ್ಕೆ ಮನನೊಂದು ಮೇ 26ರಂದು ನಿಗಮದ ಅಧ್ಯಕ್ಷ  ಚಂದ್ರಶೇಖರನ್ (52) ಶಿವಮೊಗ್ಗದ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

 ಈ ಪ್ರಕರಣದ ತನಿಖೆ ಮಾಡುತ್ತಿರುವ ಎಸ್ಐಟಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಮತ್ತು ಮಾಜಿ ಲೆಕ್ಕಾಧಿಕಾರಿ ಪರಶುರಾಮ್  ಜಿ. ದುರ್ಗಣ್ಣನವರ್ ರನ್ನು ಬಂಧಿಸಿತು. ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ತನ್ನ ಆತ್ಮಹತ್ಯೆಗೆ  ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ,ಲೆಕ್ಕಾಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಶುಚಿಸ್ಮಿತಾ ರಾವುಲ್  ಮುಖ್ಯ ಕಾರಣ ಅಂತ ಬರೆದಿದ್ದರು.ಅಲ್ಲದೆ ಪರೋಕ್ಷವಾಗಿ ಸಚಿವರ ಹೆಸರನ್ನು ಬರೆದಿದ್ದರು ಎನ್ನಲಾಗಿದೆ. ನಿಗಮದ ಅಧ್ಯಕ್ಷ  ಚಂದ್ರಶೇಖರನ್  ಆತ್ಮಹತ್ಯೆಯ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ .

ಆದರೆ ಈ ಆರೋಪವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ನಿರಾಕರಿಸಿದ್ದಾರೆ.  ಕೋಟ್ಯಾ೦ತರ ರೂಪಾಯಿ ಅವ್ಯವಹಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ ಐಟಿಗೆ ವಹಿಸಿದ್ದು  ಅಧಿಕಾರಿಗಳು ಕೂಲಂಕುಷ ತನಿಖೆ ನಡೆಸುತ್ತಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!