ಹಾಸನ ಪೆನ್‌ಡ್ರೈವ್ ಪ್ರಕರಣ ಸಂಬಂಧ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟವೂ ಜೋರಾಗೇ ನಡೀದಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಅವಕಾಶ ಮಾಡಿಕೊಟ್ಟಿದ್ದೇ ಕೇಂದ್ರ ಸರ್ಕಾರ ಎಂದು ರಾಜ್ಯ ಸರ್ಕಾರ ಆರೋಪ ಮಾಡಿತ್ತು. ಇದೀಗ ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ಕೊಟ್ಟಿರುವ ಪ್ರಧಾನ ಮಂತ್ರಿ ಮೋದಿ ಪ್ರಜ್ವಲ್ ವಿದೇಶಕ್ಕೆ ಹೋಗಿರೋದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆರೋಪಗಳಿಗೆ ತಿರುಗೇಟು ಕೊಟ್ಟಿದ್ದಾರೆ.
ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾರೆ. ಪ್ರಜ್ವಲ್ ರೇವಣ್ಣನಂತಹ ವ್ಯಕ್ತಿಯ ಮೇಲೆ ಕರುಣೆ ತೋರಿಸುವ ಅಗತ್ಯ ಇಲ್ಲ. ಅಂತಹ ವ್ಯಕ್ತಿಗಳ ವಿರುದ್ಧ ನಿರ್ದ್ಯಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು. ಆದ್ರೆ ಇಡೀ ಘಟನೆಯೇ ಬಹಳ ಅನುಮಾನಾಸ್ಪದವಾಗಿದೆ. ರಾಜ್ಯ ಸರ್ಕಾರ ಪ್ರಜ್ವಲ್ ಮೇಲೆ ನಿಗಾ ಇಡಬೇಕಿತ್ತು ಎಂದು ಮೋದಿ ಕಿಡಿಕಾರಿದ್ದಾರೆ.