ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಷಣ ಮಾಡುತ್ತಿದ್ದಾಗಲೇ ಪ್ರಜ್ಞೆ ತಪ್ಪಿ ಕುಸಿದುಬಿದ್ದ ಘಟನೆ ಮಹಾರಾಷ್ಟ್ರದ ಯವತ್ಮಾಲ್‌ದಲ್ಲಿ ನಡೆದಿದೆ. ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ನಿತಿನ್ ಗಡ್ಕರಿ ಕುಸಿದು ಬಿದ್ದಿದ್ದಾರೆ.
ಶಿವಸೇನೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ರಾಜಶ್ರೀ ಪಾಟೀಲ್ ಪರ ಗಡ್ಕರಿ ಪ್ರಚಾರ ನಡೆಸಲು ಯವತ್ಮಾಲ್ ಗೆ ಆಗಮಿಸಿದ್ರು. ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಗಡ್ಕರಿ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ಅಂಗರಕ್ಷಕರು ಹಾಗೂ ಬಿಜೆಪಿ ನಾಯಕರು ಸೇರಿ ಗಡ್ಕರಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.