ಬೆಳ್ತಂಗಡಿ ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್ ಪೂಂಜ ನಿವಾಸಕ್ಕೆ ಭೇಟಿ ನೀಡಿ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಹರೀಶ್ ಪೂಂಜ ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಎರಡೂ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಜಾಮೀನಿಗೆ ಅರ್ಜಿ ಸಲ್ಲಿಸಲು ಪೂಂಜ ಬೆಂಗಳೂರಿನತ್ತ ತೆರಳಿದ್ದಾರೆ.

ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ಅವರು ಹರೀಶ್ ಪೂಂಜ ಪರವಾಗಿ ಜಾಮೀನು ಅರ್ಜಿ ಸಲ್ಲಿಸಲ್ಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿಗೆ ಹೋಗುತ್ತಿದ್ದಾರೆ.
ಪೂಂಜ ನಿನ್ನೆ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿ ತನಿಖೆಯ ಬಳಿಕ ಠಾಣಾ ಜಾಮೀನಿನಲ್ಲಿ ಬಿಡುಗಡೆ ಯಾಗಿದ್ದರು. ಅಲ್ಲದೇ ಮತ್ತೆ ವಿಚಾರಣೆಗೆ ಹಾಜರಾಗಲು 5 ದಿನ ಕಾಲಾವಕಾಶ ಕೇಳಿದ್ದರು. ಇದೀಗ ಬೆಂಗಳೂರಿಗೆ ತೆರಳಿದ್ದಾರೆ.ಇನ್ನು ಬೆಳ್ತಂಗಡಿ ಪೊಲೀಸರ ಮೇಲೂ ಹರೀಶ್ ಪೂಂಜ ಪ್ರಕರಣ ದಾಖಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ಇನ್ನು ಬೆಳ್ತಂಗಡಿ ಪೊಲೀಸರ ಮೇಲೂ ಹರೀಶ್ ಪೂಂಜ ಪ್ರಕರಣ ದಾಖಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.