Saturday, May 2, 2026
Homeಜಿಲ್ಲಾಸುದ್ದಿಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಮತ‌ ಎಣಿಕೆಯಲ್ಲಿ ರಾಜೇಗೌಡ ಗೆಲುವು!

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಮತ‌ ಎಣಿಕೆಯಲ್ಲಿ ರಾಜೇಗೌಡ ಗೆಲುವು!

ಚಿಕ್ಕಮಗಳೂರು: ನಗರದ IDSG ಕಾಲೇಜಿನಲ್ಲಿ ಇಂದು ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಮತ‌ ಎಣಿಕೆ ನಡೆದಿದ್ದು ಶಾಸಕ ರಾಜೇಗೌಡ ಅವರು ಗೆಲುವು ಸಾಧಿಸಿದ್ದಾರೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಆರೋಪಿಸಿ ಪರಾಜಿತ ಅಭ್ಯರ್ಥಿ ಬಿಜೆಪಿಯ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ ರಾಜೇಗೌಡ ಎದುರು 201 ಮತಗಳ ಅಂತರದಿಂದ ಸೋತಿದ್ದರು. ಒಟ್ಟು 1822 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತವಾಗಿದ್ದವು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಮರು ಎಣಿಕೆಗೆ ಮನವಿ ಮಾಡಿದ್ದರು ಕೂಡ ಅಂದಿನ ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಟಿ.ಡಿ. ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಇಂದು ಮರು ಎಣಿಕೆ ನಡೆದಿದೆ. ಅದರಲ್ಲಿ ಈಗ ಟಿ.ಡಿ ಋಾಜೇಗೌಡ ಅವರು ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.


RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!