ಬೆಂಗಳೂರು:ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಆಗಸ್ಟ್ 1ಕ್ಕೆ ತೀರ್ಪು ಪ್ರಕಟಿಸಲಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ ಎಂದು ಜಡ್ಜ್ ಸಂತೋಷ್ ಗಜಾನನ ಭಟ್ ತಿಳಿಸಿದರು.
ಸರ್ಕಾರಿ ಪರ ವಕೀಲರು ಹೊಳೆನರಸೀಪುರದ ಕನ್ನಿಕಡದ ಮನೆಯ ಗೂಗಲ್ ಮ್ಯಾಪ್ ನೀಡಲಾಗಿದೆ, ಗ್ಯೂಗಲ್ ಮ್ಯಾಪ್‌ನಲ್ಲಿ ಮನೆ, ಕೆಲಸದವರ ಶೆಡ್ ಎಲ್ಲವನ್ನೂ ನೀಡಲಾಗಿದೆ. ಗೂಗಲ್ ಮ್ಯಾಪ್ ಆಧರಿಸಿ ಮಹಜರು ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು. ಅಂತಿಮವಾಗಿ ಕೋರ್ಟ್ ಇಂದು ಮಧ್ಯಾಹ್ನದ ಒಳಗೆ ಸ್ಪಷ್ಟನೆ ನೀಡುವಂತೆ ಸರ್ಕಾರಿ ಪರ ವಕೀಲರಿಗೆ ಸೂಚಿಸಿತು.
ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಸೆರೆ ಮಾಡಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಇಂದಿನ ಕೋರ್ಟ್ ಕಲಾಪಕ್ಕೆ ಪ್ರಜ್ವಲ್ ರೇವಣ್ಣ ಹಾಜರಾಗಿದ್ದರು.
ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದೆ.