ಬೆಂಗಳೂರು: ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಿನ್ನೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದ ಹಿನ್ನೆಲೆ ಎಸ್ ಐಟಿ ಅಧಿಕಾರಿಗಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಮೇ.14 ರವರೆಗೆ ಸದ್ಯ ರೇವಣ್ಣ ಅವರಿಗೆ ಜೈಲೇ ಗತಿ ಎಂಬಂತಾಗಿದೆ.
ಇದೀಗ ಜೈಲಿಗೆ ಶಿಫ್ಟ್ ಆದ ಬೆನ್ನಲ್ಲೇ ರೇವಣ್ಣ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಸದ್ಯ ಜೈಲಿನ ವೈದ್ಯರೇ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಇನ್ನು ಮೊನ್ನೆಯಷ್ಟೇ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಮತ್ತೆ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇನ್ನು ನಿನ್ನೆ ನ್ಯಾಯಾಧೀಶರ ಮುಂದೆ ಹೊಟ್ಟೆನೋವಿನಿಂದ ನಾನು ಮೂರು ದಿನ ನಿದ್ದೆ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದರು.