Tuesday, August 11, 2026
Homeರಾಜಕೀಯಇನ್ನೂ ಸಿಕ್ಕಿಲ್ಲ ಭವಾನಿ ರೇವಣ್ಣ ಸುಳಿವು; ಲುಕ್‌ ಔಟ್‌ ನೋಟಿಸ್‌ ಜಾರಿಗೊಳಿಸಲು ಎಸ್‌ ಐಟಿ ಸಿದ್ದತೆ

ಇನ್ನೂ ಸಿಕ್ಕಿಲ್ಲ ಭವಾನಿ ರೇವಣ್ಣ ಸುಳಿವು; ಲುಕ್‌ ಔಟ್‌ ನೋಟಿಸ್‌ ಜಾರಿಗೊಳಿಸಲು ಎಸ್‌ ಐಟಿ ಸಿದ್ದತೆ

Telegram Group
Join Now

ಬೆಂಗಳೂರು : ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಅವರ ಸುಳಿವು ಇದುವರೆಗೂ ಎಸ್ ಐಟಿ ಅಧಿಕಾರಿಗಳಿಗೆ ಸಿಕ್ಕಿಲ್ಲ. ಭವಾನಿ ಅವರನ್ನು ಸಂಪರ್ಕಿಸುವ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು ಇದೀಗ ಕೊನೆಗೆ  ಲುಕ್‌ ಔಟ್‌ ನೋಟಿಸ್‌ ಜಾರಿಗೊಳಿಸಲು ಎಸ್‌ ಐಟಿ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಅವರ ಜಾಮೀನು ಅರ್ಜಿ ಕೂಡ ವಜಾಗೊಂಡಿರೋದರಿಂದ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಭವಾನಿ ರೇವಣ್ಣ ದೇಶ ತೊರೆಯದಂತೆ ಎಲ್ಲ ವಿಮಾನ ನಿಲ್ದಾಣಗಳಿಗೆ ಲುಕ್‌ ಔಟ್‌ ನೋಟಿಸ್‌ ಜಾರಿಯಾಗಲಿದ್ದು, ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ನಿನ್ನೆ ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅಲ್ಲಿರಲಿಲ್ಲ. 15 ದಿನಗಳ ಹಿಂದೆಯೇ ಅವರು ನಿಗೂಢ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಇದೀಗ SIT ಅಧಿಕಾರಿಗಳು ಮೈಸೂರಿನ 5 ಸ್ಥಳಗಳಲ್ಲಿ ಭವಾನಿ ರೇವಣ್ಣ ಅವರಿಗೆ ಹುಡುಕಾಟ ನಡೆಸಿದ್ದಾರೆ. ಹಾಸನದ ಮೈಸೂರು ಜಿಲ್ಲೆಯಲ್ಲಿ 5 ಕಡೆ ಹುಡುಕಾಟ ನಡೆಸಿದ್ದಾರೆ. ಸಹೋದರಿ ಮಗನ ಮನೆ ಫಾರ್ಮ್ ಹೌಸ್ ಪರಿಚಯ ಗುತ್ತಿಗೆದಾರ ಹಾಗೂ ಫಾರ್ಮ್ ಹೌಸ್ ಸೇರಿದಂತೆ ಅವರ ಪರಿಚಯಸ್ಥರ ಮನೆಯಲ್ಲಿ SIT ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಭವಾನಿ ರೇವಣ್ಣಗೆ ಎಸ್​ಐಟಿ ಎರಡೆರಡು ನೋಟಿಸ್ ಕೊಟ್ಟಿತ್ತು. ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಭವಾನಿ ಪತ್ರ ಬರೆದಿದ್ದರು. ಹಾಗಾಗಿ ಇಂದು ಬೆಳಿಗ್ಗೆಯಿಂದ ಪತ್ರದಂತೆ ಎಸ್​ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ಬಂದಿದ್ದಾರೆ. ಆದರೆ, ಮನೆಯೊಳಗೆ ಹೋದ ಎಸ್​ಐಟಿ ಅಧಿಕಾರಿಗಳಿಗೆ ಶಾಕ್ ಕಾದಿದೆ. ಭವಾನಿ ರೇವಣ್ಣ ಮನೆಯಲ್ಲಿದ್ದ ಇರದ ಕಾರಣ, ಸಂಜೆ 5ವರೆಗೆ ಕಾದು ಇದೀಗ ಅವರಿಗಾಗಿ ಮೈಸೂರಿನ 5 ಕಡೆ ಹುಡುಕಾಟ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments