Wednesday, July 15, 2026
Homeಬ್ರೇಕಿಂಗ್ ನ್ಯೂಸ್ರಾಜ್ಯ ರಾಜಕೀಯದಲ್ಲಿ ಸಂಚಲನ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

ರಾಜ್ಯ ರಾಜಕೀಯದಲ್ಲಿ ಸಂಚಲನ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

Telegram Group
Join Now

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.ರಾಜ್ಯ ರಾಜಕಾರಣದಲ್ಲಿ ದಶಕದ ದೊಡ್ಡ ಹೈಡ್ರಾಮಾ ಅಂತ್ಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದೆ.

ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.

ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ.

ಮುಂದಿನ‌‌‌ ಸಿಎಂ ಯಾರು ಎಂಬ ಹೆಸರನ್ನ ಹೇಳದ ಸಿದ್ದರಾಮಯ್ಯ, ಮುಂದೆ ಯಾರು ಆಗುತ್ತಾರ ಎನ್ನುವುದನ್ನು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ನಾಯಕರು ನಾವು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. ಅವರೇ ಎಲ್ಲ ಮುಂದಿನ ಪ್ರಕ್ರಿಯೆ ನಡೆಸುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್‌ ಕಣ್ಣಂಚಲಿ‌ ನೀರು ಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಡಿಕೆಶಿ ಭಾವುಕರಾದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments