Lok Sabha Elections;12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಲೋಕಸಭಾ ಕ್ಷೇತ್ರಗಳಿಗಾಗಿ ಏಪ್ರಿಲ್ 26ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗಲಿದ್ದು, ಮೊದಲ ಹಂತದಲ್ಲಿ ಉಡುಪಿ -ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ,ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಈ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕಡೇ ದಿನವಾಗಿದ್ದು ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಬಹುದಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್ ಇಂದು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರು ಗ್ರಾಮಾಂತರದ ಕನಕಪುರದಲ್ಲಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದ ಬಳಿಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
