Sumalatha missed Mandya BJP ticket ಮಂಡ್ಯ; ನಾನು ರಾಜಕಾರಣ ಮಾಡಿದರೆ ಅದು ಮಂಡ್ಯದಿಂದ ಮಾತ್ರ ಎನ್ನುತ್ತಾ ಮಂಡ್ಯದಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸಂಸದೆ ಸುಮಲತಾ ಅವರಿಗೆ ಭಾರೀ ನಿರಾಸೆಯಾಗಿದೆ. ಸಕ್ಕರೆ ನಾಡು ಸಮಲತಾ ಕೈ ತಪ್ಪಿರೋದು ಕನ್ಫರ್ಮ್ ಆಗಿದೆ.
ಈ ಬಗ್ಗೆ ನಿನ್ನೆ ನಡೆದ ಬಿಜೆಪಿ ಸಭೆಯಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದಾರೆ. ನಿನ್ನೆ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು ಲೋಕಸಭೆ ಚುನಾವಣೆಗೆ ಕಗ್ಗಾಂಟಾಗಿದ್ದ ಜೆಡಿಎಸ್ ಕ್ಷೇತ್ರಗಳನ್ನು ಕೊನೆಗೂ ಬಿಜೆಪಿ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದಿದ್ದಾರೆ.
ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಇಂದು ರಾತ್ರಿ ಅಥವಾ ನಾಳೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇನ್ನುಸುಮಲತಾ ಅಂಬರೀಶ್ ಬಿಜೆಪಿ ಬಿಗ್ ಶಾಕ್ ನೀಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಮಂಡ್ಯ ಲೋಕಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಗೆ ಬಿಗ್ ಶಾಕ್ ಎದುರಾಗಿದ್ದು, ಮುಂದೆ ಅವರು ಪಕ್ಷೇತರವಾಗಿ ಚುನಾವಣೆಗೆ ನಿಲ್ತಾರಾ ಅಥವಾ ಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.
