Tuesday, May 5, 2026
Homeಕ್ರೈಮ್ವಿಜೇತ ಅಭ್ಯರ್ಥಿ ಡಿ.ಎನ್. ಜೀವರಾಜ್ ಎಫ್​ಐಆರ್ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಿಜೇತ ಅಭ್ಯರ್ಥಿ ಡಿ.ಎನ್. ಜೀವರಾಜ್ ಎಫ್​ಐಆರ್ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಬ್ಯಾಲೆಟ್​ ಪೇಪರ್​ಗಳನ್ನು ತಿದ್ದಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್​ ರದ್ದುಕೋರಿ ವಿಜೇತ ಅಭ್ಯರ್ಥಿಯಾಗಿರುವ ಡಿ.ಎನ್. ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮತ ಪತ್ರಗಳನ್ನು ತಿದ್ದಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಚಿಕ್ಕಮಗಳೂರು ಪೊಲೀಸ್ ಠಾಣಾಧಿಕಾರಿಗಳು ಮತ್ತು ದೂರುದಾರ ಸುದೀರ್​ ಕುಮಾರ್ ಮುರೊಳ್ಳಿ ಅವರುನ್ನು ಪ್ರತಿವಾದಿಯನ್ನಾಗಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದಲ್ಲಿ ಹೈಕೋರ್ಟ್​ಗೆ ಪರಾಜಿತ ಅಭ್ಯರ್ಥಿಯಾಗಿದ್ದ ಜೀವರಾಜ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು . ಅರ್ಜಿಯ ಸಂಬಂಧ ಸುಧೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಚುನಾಣೆ ಘೋಷಣೆ ಮಾಡಬೇಕು ಎಂದು ನಿರ್ದೇಶನ ನೀಡಿತ್ತು.

ಈ ಆದೇಶದಂತೆ ಮೇ 3 ರಂದು ಅಂಚೆ ಮತರಗಳ ಮರು ಎಣಿಕೆ ನಡೆಸಿದ್ದ ಫಲಿತಾಂಶವನ್ನೂ ಘೋಷಣೆ ಮಾಡಲಾಗಿತ್ತು. ಆದರೆ, ಈ ಹಿಂದೆ ಅಂದರೆ 2023ರ ಮೇ 15ರಂದು ನಡೆದಿದ್ದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಎರಡೂ ಮತ್ತು ಅದಕ್ಕಿಂತ ಹೆಚ್ಚು ಬಾರಿ ನಮೂದಾಗಿದ್ದ ಮತಗಳನ್ನು ತಿರಸ್ಕರಿಸಲಾಗಿತ್ತು.

ಮತ ಎಣಿಕೆ ಪ್ರಾರಂಭಕ್ಕೂ ಮುನ್ನ ಮತ ಎಣಿಕೆ ಟೇಬಲ್​ ಏಜೆಂಟ್​ ಆಗಿದ್ದ ದೂರುದಾರರು, ಮತ ಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ. ಟ್ರಂಕ್‌ಗಳ ಲಾಕ್ ಕಟ್ ಆಗಿತ್ತು ಎಂಬುದಾಗಿ ಸ್ಥಳದಲ್ಲಿಯೇ ಆರೋಪಿಸಿದ್ದರು. ಮತ ಪತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!