ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ಶುಕ್ರವಾರ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯ ವಾದ-ಪ್ರತಿವಾದ ಆಲಿಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ(ಇಂದಿಗೆ) ಮುಂದೂಡಿತ್ತು.ಅಲ್ಲದೇ ಪ್ರಕರಣದಲಿ ಸದ್ಯ ರೇವಣ್ಣಗೆ ನೀಡಲಾಗಿರುವ ಮಧ್ಯಂತರ ಜಾಮೀನನ್ನೂ ಸೋಮವಾರದವರೆಗೆ ವಿಸ್ತರಿಸಿತ್ತು.
ಇಂದು ಆ ಅರ್ಜಿಯ ವಿಚಾರಣೆ ನಡೆಯಲಿದ್ದು ರೇವಣ್ಣಗೆ ಬೇಲೋ ಜೈಲೋ ಅನ್ನೋದು ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.
ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯ ಹೇಳಿಕೆ ಆಧರಿಸಿ ಪೊಲೀಸರು ಎಫ್ ಐಆರ್ ನಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ ಸೆಕ್ಷನ್ ಸೇರ್ಪಡೆ ಮಾಡಿದ್ದಾರೆ.