ಬೆಂಗಳೂರು; ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಅಪ್ರಾಪ್ತೆ ಮೇಲೆ ಬಿಎಸ್ ವೈ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇನ್ನು ದೂರದರ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.