Friday, July 17, 2026
Homeಸ್ಪೋರ್ಟ್ಸ್IPL 2026: ಎರಡನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

IPL 2026: ಎರಡನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

Telegram Group
Join Now

ಅಹಮದಾಬಾದ್: ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್‌ ಮಷಿನ್ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಂತರ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಅಪ್ರತಿಮ ಕೀರ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭಾಜನವಾಗಿದೆ. 5 ವಿಕೆಟ್‌ಗಳ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿಶ್ವದಾದ್ಯಂತ ಇರುವ ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, “ಈ ಸಲವೂ ಕಪ್ ನಮ್ದೇ” ಎಂಬ ಘೋಷಣೆ ಎಲ್ಲೆಡೆ ಮೊಳಗುತ್ತಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ (GT), ಆರ್‌ಸಿಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ನಲುಗಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನು 12 ಎಸೆತ ಬಾಕಿ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 161 ರನ್‌ ಹೊಡೆದು ಜಯಗಳಿಸಿತು.

ಆರ್‌ಸಿಬಿಯ ಈ ಐತಿಹಾಸಿಕ ಕಪ್ ಗೆಲುವಿನಲ್ಲಿ ರನ್‌ ಮಷಿನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದರು. ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ (Opener) ಕ್ರೀಸ್‌ಗಿಳಿದು ಜಿಟಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪಂದ್ಯದ ಮೊದಲ ಓವರ್‌ನಿಂದಲೇ ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈದ ಕೊಹ್ಲಿ ಅಜೇಯ 75 ರನ್‌(42 ಎಸೆತ, 9 ಬೌಂಡರಿ, 3 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments