ಚಿಕ್ಕಮಗಳೂರು : ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘದ ಆಶ್ರಯದಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಗೌಡ ಸಮುದಾಯದ ಮಹಿಳೆಯರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ʼಗೌಡ್ತಿಯರ ಪ್ರೀಮಿಯರ್ ಲೀಗ್ʼ ಲಾಂಛನ ಬಿಡುಗಡೆ ಮಾಡಲಾಗಿದೆ.
ನಗರದ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೃಂಗೇರಿಯ ಆದಿಚುಂಚನಗಿರಿ ಶಾಖಾ ಮಠ ಕಾರ್ಯದರ್ಶಿ ಗುಣನಾಥ ಸ್ವಾಮೀಜಿ ಲೋಗೋ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುನ್ನೆಲೆಗೆ ಬರುತ್ತಿದ್ದಾರೆ. ಎಲ್ಲರನ್ನೂ ಒಂದೆಡೆ ಸೇರಿಸುವ ಕಾರ್ಯಕ್ರಮಗಳ ಮೂಲಕ ಮತ್ತಷ್ಟು ಸಂಘಟಿತರಾಗುತ್ತಿದ್ದಾರೆ. ಕ್ರಿಕೆಟ್ ಪಂದ್ಯಾವಳಿ ಕೂಡಾ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

ಟೈಗರ್ಸ್ ತಂಡದ ಸಚಿನ್ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಸಿಕೊಟ್ಟರು. ನವೆಂಬರ್ 23, 24ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಒಕ್ಕಲಿಗರ ಮಹಿಳಾ ಸಂಘದ ಅಧ್ಯಕ್ಷೆ ಕಲ್ಪನಾ ಪ್ರದೀಪ್, ಉಪಾಧ್ಯಕ್ಷೆ ಕಾವ್ಯ ಸುಕುಮಾರ್, ಸಹಕಾರ್ಯದರ್ಶಿ ಕೋಮಲ ರವಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಪಿ. ರಾಜಶೇಖರ್, ಉಪಾಧ್ಯಕ್ಷ ಎನ್. ಲಕ್ಷ್ಮಣ್ ಗೌಡ ಮುಂತಾದವರಿದ್ದರು.

